alex Certify ಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…?

ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೇ ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ.

ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರಿಗೆ ಕಾಂಗ್ರೆಸ್ ನಾಯಕರು ಬುಲಾವ್ ನೀಡಿದ್ದಾರೆ. ಚುನಾವಣೆಯಲ್ಲಿ ಸೋಲು ಕಂಡಿರುವ ಶೆಟ್ಟರ್ ಅವರಿಗೆ ಬೆಂಗಳೂರಿಗೆ ಬರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬುಲಾವ್ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದ್ದರೂ ಸೋಲಿಗೆ ಕಾರಣವೇನೆಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಂಜೆ ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಶೆಟ್ಟರ್ ಗೆ ಕರೆ ಮಾಡಿ ಬೆಂಗಳೂರಿಗೆ ಬರಲು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಬೆಂಗಳೂರಿನ ಪ್ರಯಾಣ ಬೆಳೆಸಿದ್ದಾರೆ.

ಶೆಟ್ಟರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರಿಗೆ ನೂತನ ಸರ್ಕಾರದಲ್ಲಿ ಸ್ಥಾನ ಮಾನ ನೀಡುವ ಕುರಿತಾಗಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...