alex Certify ಎಲೆಕ್ಷನ್ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಷನ್ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ 8:15ಕ್ಕೆ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ನಿನ್ನೆ ಸ್ಪೀಕರ್ ಕಾಗೇರಿಯವರನ್ನು ಭೇಟಿಯಾಗಿ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಶಾಮನೂರು ಶಿವಶಂಕರಪ್ಪ ಅವರ ವಿಮಾನದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿ ರಾತ್ರಿಯೆಲ್ಲ ಕಾಂಗ್ರೆಸ್ ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲಾ, ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...