
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭಾರಿ ಮುನ್ನಡೆ ಗಳಿಸಿದ್ದಾರೆ. ಜಗದೀಶ್ ಶೆಟ್ಟರ್ ಅವರ ಅಡ್ರೆಸ್ ಕೇಳಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮುಖಭಂಗವಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ತೀವ್ರ ಹಿನ್ನಡೆ ಕಂಡಿದ್ದಾರೆ. ಮತ ಎಣಿಕೆ ಆರಂಭದ ಸುತ್ತುಗಳಲ್ಲಲೇ ಹಿನ್ನಡೆ ಕಂಡ ಮೃಣಾಲ್ ಹೆಬ್ಬಾಳ್ಕರ್ ಎಣಿಕೆ ಕೇಂದ್ರದಿಂದ ತೆರಳದ್ದಾರೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.