
ಹುಬ್ಬಳ್ಳಿ: ಪಕ್ಷದ ವರಿಷ್ಠರು ಸೂಚಿಸಿದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಸೇರಿದಂತೆ ಯಾವುದೇ ಕ್ಷೇತ್ರದ ಸ್ಪರ್ಧಿಸುವಂತೆ ತಿಳಿಸಿದಲ್ಲಿ ಸ್ಪರ್ಧಿಸುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ ಬಗ್ಗೆ ವರಿಷ್ಠರು ಯಾವ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ. ಒಂದು ವೇಳೆ ಪಕ್ಷದ ಪರ ಕೆಲಸ ಮಾಡು ಎಂದು ಹೇಳಿದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.