alex Certify BREAKING NEWS: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ಕಾವೇರಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಗದೀಶ್ ಶೆಟ್ಟರ್ ಬಳಿಕ ಚುನಾವಣಾಧಿಕಾರಿ‌ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಶಾಸಕರಾದ ಅಭಯ್ ಪಾಟೀಲ, ಬಾಲಚಂದ್ರ ಜಾರಕಿಹೊಳಿ‌ ಉಪಸ್ಥಿತರಿದ್ದರು.

ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶೆಟ್ಟರ್ 2ಲಕ್ಷ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...