ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರಪತಿ ಜೊತೆ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನ ಕಲ್ಪಿಸದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ವೇದಿಕೆಯ ಗಣ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಮಾಯವಾಗಿದೆ. ಸ್ಥಳೀಯ ಶಾಸಕರಾದ ಜಗದೀಶ್ ಶೆಟ್ಟರ್ ಹೆಸರನ್ನು ಕೈ ಬಿಟ್ಟು ಎಡವಟ್ಟು ಮಾಡಲಾಗಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಹೆಸರನ್ನು ಕೈ ಬಿಡಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಅಶ್ವತ್ಥನಾರಾಯಣ, ಶಂಕರ ಪಾಟೀಲ ಮುನೇನಕೊಪ್ಪ, ಬೈರತಿ ಬಸವರಾಜ, ಹಾಲಪ್ಪ ಆಚಾರ್ ಮತ್ತು ಮೇಯರ್ ಅವರಿಗೆ ವೇದಿಕೆಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ಗಣ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಬಿಟ್ಟಿದ್ದಕ್ಕೆ ಬಿಜೆಪಿಯಲ್ಲಿ ಬೇಸರ ವ್ಯಕ್ತವಾಗಿದೆ ಎನ್ನಲಾಗಿದೆ.