alex Certify ಯಾವುದೇ ಹಂತದಲ್ಲಿ ಸರ್ಕಾರ ಪತನವಾಗಬಹುದು: ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾವುದೇ ಹಂತದಲ್ಲಿ ಸರ್ಕಾರ ಪತನವಾಗಬಹುದು: ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಸಿಎಂ, ಡಿಸಿಎಂ, ಸಚಿವರ ನಡುವೆ ಆಂತರಿಕ ತಿಕ್ಕಾಟ ಆರಂಭವಾಗಿದೆ. ಆಡಳಿತ ವ್ಯವಸ್ಥೆ ವಿಫಲವಾಗಿದೆ. ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಯಾವುದೇ ಹಂತದಲ್ಲಾದರೂ ಸರ್ಕಾರ ಪತನವಾಗಬಹುದು ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ನಡೆದ ಔತಣ ಕೂಟದಲ್ಲಿ ಸಿಎಂ, ಸಚಿವರು ಭಾಗಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗಿರುವ ಸಂದರ್ಭದಲ್ಲಿ, ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಹೋಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಹೇಲಿಕೆ ಕೊಡುವುದು, ಔತಣಕೂತ ಆಯೋಜಿಸುವುದು, ಅದಕ್ಕೆ ಡಿಸಿಎಂ ಗೈರಾಗುವುದು ಇದನ್ನೆಲ್ಲ ಗಮನಿಸಿದರೆ ರಾಜ್ಯ ಸರ್ಕಾರ ಉತ್ತಮ ರೀತಿಯಲ್ಲಿ ನಡೆಯುತ್ತಿಲ್ಲ ಎಂಬುದು ಸ್ಪಷ್ಟ ಎಂದರು.

ಬಹುಮತ ಇದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಹೇಗೋ ನಡೆದಿದೆ. ಆದರೆ ಸ್ವತಃ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನಗೊಂದಿದ್ದಾರೆ. ಅಭಿವೃದ್ಧಿ ಕೆಲಸ ನಿಂತುಹೋಗಿದೆ. ಹತ್ತಾರು ಸಾವಿರ ಕೋಟಿ ಬಿಲ್ ಪಾವತಿಯಾಗದೇ ಗುತ್ತುಗೆದಾರರು ಒತ್ತಡದಲ್ಲಿದ್ದಾರೆ. ಜನರ ಮೆಲೆ ಭಾರ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಬಸ್ ಟಿಕೆಟ್ ದರ ಸೇರಿ ಬೆಲೆ ಏರಿಕೆ ಬರೆ ಎಳೆಯುತ್ತಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದೆ. ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಆರೋಪಿಗಳಿಗೆ ಜಾಮೀನು ಕೊಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸರ್ಕಾರ ಯಾವುದೇ ಸಂದರ್ಭದಲ್ಲಿ ಬೀಳುವ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...