ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಘೋಷಣೆ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿಯ 42 ಪದಾಧಿಕಾರಿಗಳು, ಪಾಲಿಕೆ 16 ಸದಸ್ಯರು ರಾಜೀನಾಮೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಆತಂಕದ ಹಿನ್ನೆಲೆಯಲ್ಲಿ ಹುಬ್ಬಳ್ಳಿ -ಧಾರವಾಡ ಪಾಲಿಕೆ ಸದಸ್ಯರು ಮತ್ತು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ರಾಜೀನಾಮೆ ಪತ್ರ ರವಾನಿಸಲಾಗಿದ್ದು, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದು ಅನಿವಾರ್ಯವೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.