alex Certify ಮಾಜಿ ಸಿಎಂ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಆತಂಕ: 16 ಪಾಲಿಕೆ ಸದಸ್ಯರು, 42 ಪದಾಧಿಕಾರಿಗಳ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಆತಂಕ: 16 ಪಾಲಿಕೆ ಸದಸ್ಯರು, 42 ಪದಾಧಿಕಾರಿಗಳ ರಾಜೀನಾಮೆ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಘೋಷಣೆ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿಯ 42 ಪದಾಧಿಕಾರಿಗಳು, ಪಾಲಿಕೆ 16 ಸದಸ್ಯರು ರಾಜೀನಾಮೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಆತಂಕದ ಹಿನ್ನೆಲೆಯಲ್ಲಿ ಹುಬ್ಬಳ್ಳಿ -ಧಾರವಾಡ ಪಾಲಿಕೆ ಸದಸ್ಯರು ಮತ್ತು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ರಾಜೀನಾಮೆ ಪತ್ರ ರವಾನಿಸಲಾಗಿದ್ದು, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದು ಅನಿವಾರ್ಯವೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...