alex Certify BIG NEWS: ಸಿಎಂ ಬದಲಾವಣೆ ವದಂತಿ ಬಗ್ಗೆ ಮಾಜಿ ಸಿಎಂ ಶೆಟ್ಟರ್ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬದಲಾವಣೆ ವದಂತಿ ಬಗ್ಗೆ ಮಾಜಿ ಸಿಎಂ ಶೆಟ್ಟರ್ ಮಹತ್ವದ ಮಾಹಿತಿ

ದಾವಣಗೆರೆ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪದೇ ಪದೇ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಯಾರು ವದಂತಿ ಹಬ್ಬಿಸುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ ಚರ್ಚೆಯೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸುಳ್ಳು ಹೇಳುವುದನ್ನೇ ಪ್ರವೃತ್ತಿ ಮಾಡಿಕೊಂಡಿದ್ದಾರೆ ಎಂದು ಶೆಟ್ಟರ್ ಆರೋಪಿಸಿದರು. ಲಿಂಗಾಯತ ಧರ್ಮವನ್ನು ಒಡೆಯಲು ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಪ್ರಚೋದನೆ ನೀಡಿದ್ದರು. ಈಗ ರಂಭಾಪುರಿ ಶ್ರೀಗಳನ್ನು ಭೇಟಿಯಾಗಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ನಂತರ ರಂಭಾಪುರಿ ಶ್ರೀಗಳ ಬಳಿ ನಾನು ಆ ರೀತಿ ಹೇಳೇ ಇಲ್ಲ ಎಂದು ತಿಳಿಸಿದ್ದಾರೆ. ಧರ್ಮ ಒಡೆದ ಬಗ್ಗೆ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ್ದಾರೆ. ಇದು ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತದು. ಸುಳ್ಳು ಹೇಳುವುದನ್ನೇ ಜೀವನ ಶೈಲಿ ಮಾಡಿಕೊಂಡಿದ್ದಾರೆ ಅನಿಸುತ್ತೆ ಎಂದು ಟೀಕಿಸಿದರು.

ಚುನಾವಣೆ ಸಮೀಪಿಸುತ್ತಿದ್ದಂತೆ ಸಿದ್ದರಾಮಯ್ಯನವರ ಪ್ರವಾಸ ಶುರುವಾಗಿದೆ. ಶೃಂಗೇರಿ ಮಠ, ರಂಭಾಪುರಿ ಪೀಠ, ಮೂರು ಸಾವಿರ ಮಠ, ತುಮಕೂರು, ಮೈಸೂರಿನ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಚುನಾವಣೆ ಸಲುವಾಗಿ ಮಠಮಾನ್ಯಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...