
ಉಡುಪಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮತನಾಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ನನಗೆ ಯಾವುದೇ ಕರೆ ಬಂದಿಲ್ಲ ಎಂದಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅಮಿತ್ ಶಾ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಜಗದೀಶ್ ಶೆಟ್ಟರ್, ದೆಹಲಿ ಹಿರಿಯ ನಾಯಕರ ಮನಸ್ಸಿನಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ. ಕರೆ ಮಾಡುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
ನನಗೆ ಯಾರೂ ಕರೆ ಮಾಡಿಲ್ಲ, ಅದಕ್ಕೆ ಉತ್ತರಿಸುವ ಪ್ರಶ್ನೆಯೂ ಇಲ್ಲ. ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈಗ ಕಾಂಗ್ರೆಸ್ ನಾಯಕನಾಗಿದ್ದೇನೆ. ಬಿಜೆಪಿ ವಿಚಾರಗಳ ಬಗ್ಗೆ ಚರ್ಚೆ ಬೇಡ ಎಂದು ಹೇಳಿದರು.