alex Certify BIG NEWS: ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ; ದಿನದಿಂದ ದಿನಕ್ಕೆ ಪಕ್ಷ ಅಧೋಗತಿಗೆ ಹೋಗ್ತಿದೆ; ಬಿ.ಎಲ್.ಸಂತೋಷ್ ಗೆ ಟಾಂಗ್ ನೀಡಿದ ಮಾಜಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ; ದಿನದಿಂದ ದಿನಕ್ಕೆ ಪಕ್ಷ ಅಧೋಗತಿಗೆ ಹೋಗ್ತಿದೆ; ಬಿ.ಎಲ್.ಸಂತೋಷ್ ಗೆ ಟಾಂಗ್ ನೀಡಿದ ಮಾಜಿ ಸಿಎಂ


ಹುಬ್ಬಳ್ಳಿ: ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರ‍ೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಬಿ.ಎಲ್.ಸಂತೋಷ್ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ಮೊದಲು ಸಂತೋಷ್ ತಮ್ಮ ಶಾಸಕರು , ಮಾಜಿ ಶಾಸಕರನ್ನು ಉಳಿಸಿಕೊಳ್ಳಲಿ. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ ಎಂದು ಟಾಂಗ್ ನೀಡಿದ್ದಾರೆ.

ಬಿ.ಎಲ್ ಸಂತೋಷ್, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಬಿಜೆಪಿ ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ ಮಡೋದಾ? ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಬೆಳಿಗ್ಗೆಯಿಂದ ಸಂಜೆಯವರೆಗೂ ಆಪರೇಷನ್ ಮಾಡೋದೇ ಬಿಜೆಪಿ ಕೆಲಸ. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸ. ದಿನದಿಂದ ದಿನಕ್ಕೆ ಪಕ್ಷ ಅಧೋಗತಿಗೆ ಹೋಗ್ತಿದೆ. ಬಿಜೆಪಿ ಮುಳುಗುತ್ತಿರುವ ಹಡಗು ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...