alex Certify ಗುಡ್ ನ್ಯೂಸ್: ಶಾಲಾ, ಕಾಲೇಜ್ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್ ಉಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಶಾಲಾ, ಕಾಲೇಜ್ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್ ಉಚಿತ

ಅಮರಾವತಿ: ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್‌ ಗಳನ್ನು ಒದಗಿಸಲಿದೆ. ಮುಖ್ಯಮಂತ್ರಿ ಜಗನ್ ಮಂಗಳವಾರ ಅವರ ಕ್ಯಾಂಪ್ ಕಚೇರಿಯಲ್ಲಿ “ಸ್ವೇಚ್ಛ” (ಸ್ವಾತಂತ್ರ್ಯ) ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅಧಿಕಾರಿಗಳ ಪ್ರಕಾರ, ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಹದಿಹರೆಯದ ಹುಡುಗಿಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಪರಿಚಯಿಸುತ್ತಿದೆ. ಈ ಯೋಜನೆಯಡಿ ಅಡಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಮಧ್ಯಂತರ ಕಾಲೇಜುಗಳಲ್ಲಿ 7 ರಿಂದ 12 ನೇ ತರಗತಿಯವರೆಗೆ ಓದುತ್ತಿರುವ ಸುಮಾರು 10 ಲಕ್ಷ ಹದಿಹರೆಯದ ಹುಡುಗಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ನೀಡಲಾಗುವುದು.

ಪೀರಿಯಡ್ಸ್ ಸಮಯದಲ್ಲಿ ವಿದ್ಯಾರ್ಥಿನಿಯರ ಗೈರುಹಾಜರಿಯನ್ನು ಕಡಿಮೆ ಮಾಡಲು, ನೈರ್ಮಲ್ಯ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಲು ಉದ್ದೇಶಿಸಲಾಗಿದೆ.

ಪ್ರತಿ ಎರಡು ತಿಂಗಳಿಗೊಮ್ಮೆ, ಅಧಿಕಾರಿಗಳು ರಾಜ್ಯಾದ್ಯಂತ 10,000 ಕ್ಕೂ ಹೆಚ್ಚು ಶಾಲೆ ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್‌ಗಳನ್ನು ವಿತರಿಸಲಿದ್ದಾರೆ.

ಇದರ ಜೊತೆಯಲ್ಲಿ, ಸರ್ಕಾರವು ಯುನಿಸೆಫ್, ವಾಶ್ ಮತ್ತು ಪಿ & ಜಿ ಸಹಯೋಗದೊಂದಿಗೆ ಪೀರಿಯಡ್ಸ್ ಬಗ್ಗೆ, ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವದ ಕುರಿತು ವಿಶೇಷ ಜಾಗೃತಿ ತರಗತಿಗಳನ್ನು ನಡೆಸುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...