ಬಿಜೆಪಿ 1 ಮತಕ್ಕೆ 2 ಸಾವಿರ ರೂಪಾಯಿ ನೀಡುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. ಸಿಂದಗಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ಗೆ ಹಣ ಹಂಚಿ ಅಭ್ಯಾಸವಾಗಿದೆ . ಹೀಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹೇಳಿದ್ರು.
ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಈ ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ಕೂಡ ಕಾಂಗ್ರೆಸ್ ಮುಕ್ತವಾಗಲಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಗಲಾಟೆಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲೇ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅವರ ಸರ್ಕಾರ ಉತ್ತಮ ಆಡಳಿತ ಕೊಟ್ಟಿದ್ದರೆ ಜನರು ಏಕೆ ಅವರನ್ನು ಸೋಲಿಸುತ್ತಿದ್ದರು..? ಎಂದು ಪ್ರಶ್ನೆ ಮಾಡಿದ್ರು.
ದಿ. ಜಯಲಲಿತಾ ಪ್ರತಿಮೆ ನಿರ್ವಹಣೆ ಜವಾಬ್ದಾರಿ ವಹಿಸಲು ಕೋರಿದ್ದ ʼಎಐಎಡಿಎಂಕೆʼ ಗೆ ಮುಖಭಂಗ..!
ಕಾಂಗ್ರೆಸ್ಗೆ ಚುನಾವಣೆಗಳಲ್ಲಿ ಹಣ ಹಂಚಿಕೆ ಮಾಡಿ ಅಭ್ಯಾಸವಾಗಿದೆ. ನಾವು ಹಣ ಹಂಚಿರುವ ಬಗ್ಗೆ ಸಾಕ್ಷ್ಯವಿದ್ದರೆ ಚುನಾವಣಾ ಆಯೋಗಕ್ಕೆ ಸಲ್ಲಿಸಲಿ. ಅದನ್ನು ಬಿಟ್ಟು ನಮ್ಮ ಮೇಲೆ ಸುಳ್ಳು ಆರೋಪ ಮಾಡಬಾರದು ಎಂದು ಹೇಳಿದ್ರು.
ಸಿಂದಗಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ, 20 ಸಾವಿರಕ್ಕೂ ಅಧಿಕ ಮತಗಳಿಂದ ಬಿಜೆಪಿ ಗೆಲುವು ಸಾಧಿಸಲಿದೆ. ಸಿಂದಗಿ ಮಾತ್ರವಲ್ಲದೇ ಹಾನಗಲ್ ಕ್ಷೇತ್ರದಲ್ಲೂ ಬಿಜೆಪಿಯೇ ಜಯ ಸಾಧಿಸಲಿದೆ. ಮೋದಿ ಹಾಗೂ ಬೊಮ್ಮಾಯಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಪಕ್ಷದ ಕೈ ಹಿಡಿಯಲಿದೆ. ದೇಶದ ಜನತೆಗೆ ಉಚಿತ ಲಸಿಕೆ ನೀಡುವುದು ಪ್ರಧಾನಿ ಮೋದಿಯ ದಿಟ್ಟ ನಿರ್ಧಾರವಾಗಿದೆ. ಜನರಿಗೆ ಬಿಜೆಪಿ ಬಗ್ಗೆ ಉತ್ತಮ ಅಭಿಪ್ರಾಯವಿದೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ರು.