ಬೆಂಗಳೂರು: ಮಸೀದಿಯೊಂದರಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮಸೀದಿಯೊಂದರ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವಿಚಾರವಾಗಿ ಧಾರ್ಮಿಕ ಭಾವನೆಗೆ ದಕ್ಕೆಯಾಗಿದೆ ಎಂದು ಆರೋಪಿಸಿ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುವುದು ಹೇಗೆ ಎಂದು ಪ್ರಶ್ನಿಸಿದೆ.
ಮಸೀದಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಇಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಜೈ ಶ್ರೀರಾಮ್ ಎಂದು ಕೂಗುವುದು ಯಾವುದೇ ವರ್ಗದ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ. ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ? ಎಂದು ಪ್ರಶ್ನಿಸಿದೆ. ಇದು ಧಾರ್ಮಿಕ ಭಾವನೆಗೆ ಧಕ್ಕೆಯಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
2023ರ ಸೆಪ್ಟೆಂಬರ್ 24ರಂದು ರಾತ್ರಿ ದಕ್ಷಿಣ ಕನ್ನಡ ಜಿಲೆಯ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿನ ಮಸೀದಿ ಆವರಣಕ್ಕೆ ನುಗ್ಗಿದ ಅಪರಿಚಿತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.