ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ ಕೋರಿದ್ದಾರೆ.
ಪ್ರಸ್ತುತ ಡರ್ಬಾನ್ ಸೂಪರ್ ಜೈಂಟ್ಸ್ ಎಸ್ಎ ಟಿ 20 ತಂಡವನ್ನು ಮುನ್ನಡೆಸುತ್ತಿರುವ ಎಡಗೈ ಸ್ಪಿನ್ನರ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ . ವೀಡಿಯೊದಲ್ಲಿ ಆಧ್ಯಾತ್ಮಿಕ ಜ್ಞಾನೋದಯದ ಮೂಲಕ ಶಾಂತಿ ಮತ್ತು ಸಾಮರಸ್ಯವನ್ನು ಬಯಸಿದ್ದಾರೆ.
ವಿಡಿಯೋದಲ್ಲಿ ಏನಿದೆ..? ‘’ಎಲ್ಲರಿಗೂ ನಮಸ್ಕಾರ. ನಾಳೆ ( ಇಂದು) ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ದಕ್ಷಿಣ ಆಫ್ರಿಕಾದಲ್ಲಿರುವ ನನ್ನ ಭಾರತೀಯ ಸಮುದಾಯಕ್ಕೆ ಶುಭ ಹಾರೈಸಲು ನಾನು ಬಯಸುತ್ತೇನೆ. ಎಲ್ಲರಿಗೂ ಶಾಂತಿ, ಸೌಹಾರ್ದತೆ ಮತ್ತು ಆಧ್ಯಾತ್ಮಿಕ ಜ್ಞಾನೋದಯವಾಗಲಿ. ಜೈ ಶ್ರೀ ರಾಮ್” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಪೋಸ್ಟ್ ಮಾಡಿದ್ದಾರೆ.