
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ.
ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಅವರ ಆಪ್ತರಾದ ವಿನಯ್, ಪ್ರದೋಶ್, ಧನರಾಜ್ ಅವರನ್ನು ಪೊಲೀಸರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಪ್ರಕರಣದ ತನಿಖೆಗಾಗಿ ಮೂರು ಬಾರಿ ಅವರನ್ನು ಕಸ್ಟಡಿಗೆ ಪಡೆದುಕೊಳ್ಳಲಾಗಿದ್ದು, ಮತ್ತೆ ಪೊಲೀಸರು ತಮ್ಮ ಕಸ್ಟಡಿಗೆ ಪಡೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾದಲ್ಲಿ ದರ್ಶನ್ ಮತ್ತು ಸಹಚರರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರುವುದು ಬಹುತೇಕ ಖಚಿತವಾಗಿದೆ.