
ತುಮಕೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 4 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ನೌಕರ ತಿಮ್ಮಯ್ಯನವರಿಗೆ ನಾಲ್ಕು ವರ್ಷ ಸಾಧಾರಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಕಿರಿಯ ಸಹಾಯಕ ತಿಮ್ಮಯ್ಯ ಜೈಲು ಶಿಕ್ಷೆಗೆ ಒಳಗಾದವರು. ನ್ಯಾಯಾಧೀಶರಾದ ಟಿ.ಪಿ. ರಾಮಲಿಂಗೇಗೌಡರಿಂದ ಆದೇಶ ಹೊರಡಿಸಲಾಗಿದೆ.
2015ರ ಏಪ್ರಿಲ್ 27ರಂದು ಲೋಕಾಯುಕ್ತರು ದಾಳಿ ನಡೆಸಿದ್ದರು. ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ. ಲೋಕಾಯುಕ್ತ ಪರವಾಗಿ ವಿಶೇಷ ಅಭಿಯೋಜಕರಾದ ಆರ್.ಎಸ್. ಪ್ರಕಾಶ್ ವಾದ ಮಂಡಿಸಿದ್ದರು. ಲೋಕಾಯುಕ್ತ ಸಿಪಿಐ ಎಂ.ಆರ್. ಗೌತಮ್ ತನಿಖೆ ನಡೆಸಿದ್ದರು. ಡಿವೈಎಸ್ಪಿ ಶಿವಕುಮಾರ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.