
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ.
ಮೊಬೈಲ್, ಗಾಂಜಾ ಇತರೆ ವಸ್ತುಗಳ ಪೂರೈಕೆಯಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಿಂದಲೇ ಕೆಲವರು ಅಪರಾಧ ಕೃತ್ಯಗಳನ್ನು ನಿರ್ವಹಿಸುತ್ತಿರುವ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.