ಬೆಂಗಳೂರು : ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರಿಂದ ಇಂದು ತಪಾಸಣೆ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಟ ದರ್ಶನ್ ಬೆನ್ನು ನೋವು ಹಾಗೂ ಇತರ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಜೈಲಿನ ಅಧಿಕಾರಿಗಳಿಗೆ ಕೆಲವು ದಾಖಲೆ ನೀಡಿದ್ದರು. ಈ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ನೀಡಲಿರುವ ವೈದ್ಯರು ನಟ ದರ್ಶನ್ ರನ್ನು ತಪಾಸಣೆ ನಡೆಸಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಗಾಗಿ ನಿನ್ನೆ ಜೈಲಿಗೆ ಆಗಮಿಸಿದ್ದಾರೆ.ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ್ ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪತಿಯನ್ನು ನೋಡಲು ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪುತ್ರ ಹಾಗೂ ವಕೀಲರೊಂದಿಗೆ ಆಗಮಿಸಿದ್ದಾರೆ.