ಜೈನ ಮುನಿ ಬರ್ಬರ ಹತ್ಯೆ ಪ್ರಕರಣ : `CBI’ ತನಿಖೆಗೆ ವಹಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಜೈನಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿ ಸ್ವಾಮೀಜಿ ಹತ್ಯೆ ಪ್ರಕರಣ ಖಂಡನೀಯ. ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ರೆ ಸತ್ಯಾಂಶ ತಿಳಿಯಲಿದೆ ಎಂದರು.

ಜೈನಮುನಿ ಸ್ವಾಮೀಜಿ ಬಗ್ಗೆ ಸುಳ್ಳು ಹೇಳಿಕೆಗಳನ್ನು ಹರಿಬಿಡಲಾಗುತ್ತಿದೆ. ವಿದ್ಯುತ್ ಶಾಕ್ ಕೊಟ್ಟು, ಕೈಕಾಲು ಕತ್ತರಿಸಿ ಹತ್ಯೆ ಮಾಡಲಾಗಿದೆ. ಶ್ರೀಗಳು ಕಾಣೆಯಾಗಿದ್ದಾರೆ ಎಂದ ಮೇಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಅಭಯ್ ಪಾಟೀಲ್ ಆರೋಪ ಮಾಡಿದ ಮೇಲೆ ಆರೋಪಿಗಳ ಹೆಸರನ್ನು ಬಾಯಿಬಿಟ್ಟಿದ್ದಾರೆ. ಪ್ರಕರಣವನ್ನು ಕೇಂದ್ರ ಸಚಿವ ಅಮಿತ್ ಶಾ ಗಮನಕ್ಕೆ ತರುತ್ತೇನೆ.ಉಪವಾಸ ಕೈಬಿಡುವಂತೆ ಗುಣಧರನಂದಿ ಶ್ರೀಗಳಿಗೆ ಮನವಿ ಮಾಡಿದ್ದೇನೆ. ನ್ಯಾಯ ಸಿಗದಿದ್ದರೆ ಎಲ್ಲರೂ ಸೇರಿ ಪ್ರತಿಭಟನೆ ಮಾಡೋಣ ಎಂದು ಹೇಳಿದ್ದೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read