alex Certify ಜೈನಮುನಿ ಕೊಲೆ ಪ್ರಕರಣ : ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ-ಲಕ್ಷ್ಮಣ್ ಸವದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈನಮುನಿ ಕೊಲೆ ಪ್ರಕರಣ : ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ-ಲಕ್ಷ್ಮಣ್ ಸವದಿ

ಬೆಂಗಳೂರು : ಜೈನಮುನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಸದನದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಹಣದ ವ್ಯವಹಾರದ ಬಗ್ಗೆಯೂ ತನಿಖೆ ಆಗಲಿ ಎಂದು ಅಭಯ್ ಪಾಟೀಲ್ ಹೇಳಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸವದಿ ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ. ರಾಜಕಾರಣ ಬೆರೆಸುವುದು ಬೇಡ ಎಂದು ಹೇಳಿದರು.

‘ಜೈನಮುನಿ’ ಹತ್ಯೆ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದರು.ವಿದ್ಯುತ್ ಶಾಕ್ ಕೊಟ್ಟು ಜೈನಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದೆ. ಘಟನೆ ಹಿನ್ನೆಲೆ ಭಾರಿ ಪ್ರತಿಭಟನೆಗಳು ಕೂಡ ನಡೆಯುತ್ತಿದೆ. ಇಂದು ‘ಜೈನಮುನಿ’ ಹತ್ಯೆ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದರು.ಜೈನಮುನಿಗಳ ಕೊಲೆ ಪ್ರಕರಣ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಕರಣದ ಮೊದಲನೇ ಆರೋಪಿ ಹೆಸರನ್ನು ಮಾತ್ರ ಹೇಳುತ್ತಿದ್ದಾರೆ. ಎರಡನೇ ಆರೋಪಿಯ ಹೆಸರು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...