
ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ನಂದಿ ಪರ್ವತ ಜೈನಮಿನಿ ಕಾಮಕುಮಾರ ನಂದಿ ಮಹಾರಜರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣ ಬಹಳ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದರು.