alex Certify BIG NEWS: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಜೇಮ್ಸ್ ಅಂಡರ್ಸನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಜೇಮ್ಸ್ ಅಂಡರ್ಸನ್

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ಜೇಮ್ಸ್ ಆಂಡರ್ಸನ್! - Pratidhvani

ಅತಿ ಹೆಚ್ಚು ವಿಕೆಟ್ ಕಬಳಿಸಿರುವ ಹೆಗ್ಗಳಿಕೆ ಹೊಂದಿರುವ ಇಂಗ್ಲೆಂಡ್ ಕ್ರಿಕೆಟ್ ದಂತಕಥೆ ಜೇಮ್ಸ್ ಅಂಡರ್ಸನ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆಯುವ ಮೊದಲ ಟೆಸ್ಟ್ ಅವರ ಅಂತಿಮ ಪಂದ್ಯವಾಗಲಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ instagram ನಲ್ಲಿ ಜೇಮ್ಸ್ ಅಂಡರ್ಸನ್ ಪೋಸ್ಟ್ ಹಾಕಿದ್ದು, ಎಲ್ಲರಿಗೂ ನಮಸ್ಕಾರ, ಲಾರ್ಡ್ಸ್ ನಲ್ಲಿ ನಡೆಯುವ ಮೊದಲ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಪಂದ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಇಂಗ್ಲೆಂಡ್ ತಂಡದ ಈ ವೇಗಿ ಈವರೆಗೂ 400 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಆಟವಾಡಿದ್ದು, ವಿವಿಧ ಸ್ವರೂಪದ ಕ್ರಿಕೆಟ್ ನಲ್ಲಿ ಒಟ್ಟು 987 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಅಲ್ಲದೆ 2015ರ ವಿಶ್ವಕಪ್ ನಲ್ಲಿ ಜೇಮ್ಸ್ ಅಂಡರ್ಸನ್ ತಮ್ಮ ಕೊನೆಯ ಏಕದಿನ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...