ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಪಾಕಿಸ್ತಾನ ಮೂಲದ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ)ಗೆ ಸೇರಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಕುಪ್ವಾರದ ಜುಮಗುಂಡ್ ಗ್ರಾಮದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನದ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಸೇನೆ ಮತ್ತು ಪೊಲೀಸರು ತಡೆದಾಗ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದೆ.
ಇಂದು ಕುಪ್ವಾರದಲ್ಲಿ ಹೊಡೆದುರುಳಿಸಿದ ಎಲ್ಲಾ ಮೂವರು ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಗೆ ಸೇರಿದವರು. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.