ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಅಲಮ್ದಾರ್ ಕಾಲೋನಿಯಲ್ಲಿ ನಡೆಸಲಾದ ಎನ್ಕೌಂಟರ್ ನಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೆಚ್ಚಿನ ತುಕಡಿಗಳನ್ನು ರವಾನಿಸಲಾಗಿದೆ. ಸುತ್ತಲಿನ ಪ್ರದೇಶ ಸುತ್ತುವರೆಯಲಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ.
ಭಯೋತ್ಪಾದನಾ ಚಟುವಟಿಕೆ ಸಂಪೂರ್ಣ ನಿಯಂತ್ರಣಕ್ಕೆ ಮುಂದಾಗಿರುವ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆ ಮುಂದುವೆಸಿವೆ. ಎರಡು ದಿನಗಳ ಹಿಂದೆ LeT ಕಮಾಂಡರ್ ಸೇರಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು.