
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಲ್ಬಾಲ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಶೋಪಿಯಾನ್ ಜಿಲ್ಲೆಯ ಕಿಲ್ ಬಾಲ್ ನಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಉಗ್ರರು ಮತ್ತು ಸೇನೆಯ ಮಧ್ಯೆ ಗುಂಡಿನ ಚಕಮಕಿ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ಯೋಧರು ಧಾವಿಸಿ ಇಡೀ ಪ್ರದೇಶ ಸುತ್ತುವರೆದು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಎನ್ ಕೌಂಟರ್ ಗಳಲ್ಲಿ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉನ್ನತ ಕಮಾಂಡರ್ ಸಲೀಂ ಪರ್ರೆ ಸೇರಿದಂತೆ ಇಬ್ಬರು ಉಗ್ರರು ಕೊಲ್ಲಲ್ಪಟ್ಟರು.
ಡಿಸೆಂಬರ್ 31 ರಂದು ಶ್ರೀನಗರದಲ್ಲಿ ಮೂವರು ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದವು. ಡಿಸೆಂಬರ್ 30 ರಂದು ದಕ್ಷಿಣ ಕಾಶ್ಮೀರದಲ್ಲಿ ಎರಡು ಎನ್ ಕೌಂಟರ್ ಗಳಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಆರು ಉಗ್ರರನ್ನು ಕೊಲ್ಲಲಾಯಿತು.