ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎನ್ಕೌಂಟರ್ ನಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ.
ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರಿಬ್ಬರು ಗಾಯಗೊಂಡಿದ್ದಾರೆ. ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾಪಡೆಗಳು ಕನಿಗಾಮ್ ಪ್ರದೇಶದಲ್ಲಿ ಶೋಧ ಕಾರ್ಯ ಕೈಗೊಂಡಿದ್ದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಸೇನೆಯಿಂದ ಎನ್ಕೌಂಟರ್ ನಡೆಸಲಾಗಿದ್ದು ಓರ್ವ ಉಗ್ರ ಹತನಾಗಿದ್ದಾನೆ. ಆತ ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವ ಎಂಬುದು ಗೊತ್ತಾಗಿಲ್ಲ. ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನಿಗಾಮ್ ಪ್ರದೇಶದಲ್ಲಿ ಉಗ್ರರ ಸದೆಬಡಿಯಲು ಕಾರ್ಯಾಚರಣೆ ಮುಂದುವರೆದಿದೆ.