
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರಿಬ್ಬರನ್ನು ಎನ್ ಕೌಂಟರ್ ಮಾಡಲಾಗಿದೆ. ಲಷ್ಕರ್ ಉಗ್ರ ಸಂಘಟನೆಯ ಅಬ್ರಾರ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಪಾಕಿಸ್ತಾನದ ಲಷ್ಕರ್ ಉಗ್ರ ಸಂಘಟನೆಯ ಕಮಾಂಡರ್ ಅಬ್ರಾರ್ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಎನ್ಕೌಂಟರ್ ನಡೆದ ಸ್ಥಳದಿಂದ 2 ಎಕೆ -47 ರೈಫಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರತಾಪಡೆ ಮತ್ತು ನಾಗರಿಕರ ಹತ್ಯೆಯಂತಹ ಹಲವಾರು ಪ್ರಕರಣಗಳಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಐಜಿಪಿ ವಿಜಯಕುಮಾರ್ ತಿಳಿಸಿದ್ದಾರೆ.