alex Certify BREAKING: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಅನಂತನಾಗ್ ಜಿಲ್ಲೆಯ ಕೊಕೆರ್ನಾಗ್ ಬಳಿ ಎನ್ ಕೌಂಟರ್ ನಡೆದಿದೆ.

ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.

ಅನಂತನಾಗ್‌ ನಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹ್ಲಾನ್ ಪ್ರದೇಶದ ಅರಣ್ಯದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ ನಡೆದಿದೆ. ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಅಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿವೆ. ಶೋಧನಾ ದಳದ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆಯಿತು, ಅವರು ಪ್ರತಿದಾಳಿ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...