
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರು ದಾಳಿ ಹಠಾತ್ ದಾಳಿ ನಡೆಸಿದ್ದಾರೆ. 10 ಯೋಧರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಶ್ರೀನಗರದ ಜೆವಾನ್ ಪ್ರದೇಶದಲ್ಲಿ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.