ಶ್ರೀನಗರ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.
ಬರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಎಲ್ ಒ ಸಿಯಲ್ಲಿ ಒಳನುಸುಳುತ್ತಿದ್ದ ಉಗ್ರರ ಪ್ರಯತ್ನವನ್ನು ಭದ್ರತಾ ಪಡೆಗಳ ಸಿಬ್ಬಂದಿ ವಿಫಲಗೊಳಿಸಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಉತ್ತರ ಕಾರ್ಶ್ಮೀರದ ಉರಿ ಸೆಕ್ಟರ್ ನ ಗೋಹಲ್ಲಾನ್ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನವನ್ನು ಸೇನಾ ಸಿಬ್ಬಂದಿ ಗಮನಿಸಿತ್ತಿದ್ದಾರೆ. ಈ ವೇಳೆ ಇಬ್ಬರು ಉಗ್ರರು ಎಲ್ ಒಸಿ ಬಳಿ ಒಳನುಗ್ಗಲು ಯತ್ನಿಸಿದ್ದಾರೆ. ಪ್ರಶ್ನೆ ಮಾಡಿದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸೇನಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರಿಂದ ಅಪಾರ ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.