ಶ್ರೀನಗರ: ಜಮ್ಮು-ಕಾಶ್ಮೀರದ ದಾಚಿಗಂ ಅರಣ್ಯಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ.
ಉಗ್ರರ ಅಡಗು ತಾಣಗಳ ಮೇಲೆ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಜಟಿ ಕಾರ್ಯಾಚರಣೆ ನಡೆಸಿದ್ದರು. ಉಗ್ರರು ಅಡಗಿದ್ದ ಜಾಗವನ್ನು ಭದ್ರತಾಪಡೆಗಳು ಸುತ್ತುವರಿಯುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾಪಡೆಗಳು ಸಹ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾಪಡೆಗಳ ಗುಂಡೇಟಿಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.