ಬೆಳಗಾವಿ: ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯಿಂದ ನಿರ್ಮಿಸಿದ ಡಾ. ಸಂಪತ್ ಕುಮಾರ್ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 30ರ ಬದಲಾಗಿ ಜನವರಿ 3ರಂದು ನಡೆಯಲಿದೆ.
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 30ರಂದು ಆಸ್ಪತ್ರೆ ಉದ್ಘಾಟನೆ ದಿನಾಂಕ ನಿಗದಿಯಾಗಿತ್ತು. ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಉದ್ಘಾಟನಾ ಸಮಾರಂಭವನ್ನು ಜನವರಿ 3ಕ್ಕೆ ಮುಂದೂಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈಗಾಗಲೇ ನೀಡಿದ ಆಮಂತ್ರಣ ಪತ್ರವೇ ಕಾರ್ಯಕ್ರಮದ ಅಧಿಕೃತ ಪ್ರವೇಶ ಪತ್ರವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.