
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಆರಂಭಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ ಅನೇಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಉಳಿದ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.