alex Certify ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆ

ಬೆಂಗಳೂರು: ಶ್ರೀಸಾಮಾನ್ಯರ ಅನುಕೂಲಕ್ಕಾಗಿ ದೇಶದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧಿ ಕೆಂದ್ರವನ್ನು ತೆರೆಯಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ.

ಬೆಂಗಳೂರಿನ ನಾಗರಬಾವಿಯಲ್ಲಿ ಜನೌಷಧಿ ಕೇಂದ್ರವೊಂದನ್ನು ಉದ್ಘಾಟಿಸಿ ಮಾತನಾಡಿದ ಸಚಿವರು – ವೈದ್ಯರು ತಮ್ಮಲ್ಲಿ ಬರುವ ರೋಗಿಗಳಿಗೆ ವಿಶೇಷವಾಗಿ ಬಡವರಿಗೆ ಜನೌಷಧಿಯನ್ನೇ ಬರೆದುಕೊಡಬೇಕು- ಎಂದು ಕರೆ ನೀಡಿದರು.

ಕೈಗೆಟಕುವ ದರದಲ್ಲಿ ಬಡವರಿಗೆ ಗುಣಮಟ್ಟದ ಔಷಧಗಳನ್ನು ಪೂರೈಸಬೇಕು ಎಂಬುದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಾಗಿದೆ. ಅವರು ಅಧಿಕಾರಕ್ಕೆ ಬಂದ ತಕ್ಷಣ ಜನಸಾಮಾನ್ಯರು ತಮ್ಮ ಆದಾಯದಲ್ಲಿ ಯಾವ ಯಾವ ಉದ್ದೇಶಕ್ಕಾಗಿ ಎಷ್ಟೆಷ್ಟು ವೆಚ್ಚ ಮಾಡುತ್ತಾರೆ ಎಂಬುದನ್ನು ತಿಳಿಯಲು ಅಂಕಿ-ಸಂಖ್ಯೆ ಇಲಾಖೆ ಮೂಲಕ ಒಂದು ಸಮೀಕ್ಷೆಯನ್ನು ನಡೆಸಲಾಗಿತ್ತು. ಸಾಮಾನ್ಯ ಜನ ತಮ್ಮ ಆದಾಯದಲ್ಲಿ ಶೇಕಡಾ 15 ರಿಂದ ಶೇಕಡಾ 30 ರಷ್ಟು ಹಣವನ್ನು ಅನಾರೋಗ್ಯದ ಔಷಧೋಪಚಾರಕ್ಕಾಗಿಯೇ ವ್ಯಯಿಸುತ್ತಾರೆ. ಮತ್ತು ಇದೇ ಕಾರಣಕ್ಕಾಗಿ ಪ್ರತಿವರ್ಷ ಒಂದು ಕೋಟಿಗೂ ಹೆಚ್ಚು ಜನ ಬಡತನದ ರೇಖೆಗಿಂತ ಕೆಳಗೆ ಹೋಗುತ್ತಿದ್ದಾರೆ ಎಂಬ ಆಘಾತಕಾರಿ ಅಂಶ ಈ ಸಮೀಕ್ಷೆಯಿಂದ ಹೊರಬಿದ್ದಿತ್ತು. ಹಾಗಾಗಿ ಬಡವರಿಗೆ ಆದಷ್ಟು ಕಡಿಮೆ ದರದಲ್ಲಿ ಗುಣಮಟ್ಟದ ಔಷಧಗಳು ಸಿಗುವಂತೆ ಮಾಡಲು ಕೇಂದ್ರವು ಈ ಯೋಜನೆಗೆ ಹೊಸ ಆಯಾಮ ನೀಡಿತು ಎಂದು ವಿವರಿಸಿದರು.

ಜನೌಷಧಿಯೂ ಬ್ರಾಂಡೆಡ್ ಔಷಧಗಳಷ್ಟೇ ಗುಣಮಟ್ಟದ್ದು. ಆದರೆ ದರ ತುಂಬಾನೇ ಕಡಿಮೆ. ಉದಾಹರಣೆಗೆ ಮಧುಮೇಹ, ಬಿಪಿ ಮುಂತಾದ ಕಾಯಲೆ ಇರುವವರು ಸಾಮಾನ್ಯ ಔಷಧ ಅಂಗಡಿಗಳಲ್ಲಿ ಔಷಧ ಖರೀದಿಸಬೇಕೆಂದರೆ ತಿಂಗಳಿಗೆ 2500 ರೂಪಾಯಿಯಿಂದ 3000 ರೂಪಾಯಿವರೆಗೆ ವೆಚ್ಚ ಮಾಡಬೇಕಾಗುತ್ತದೆ. ಆದರೆ, ಜನೌಷಧ ಅಂಗಡಿಗಳಲ್ಲಿ ಅದೇ ಔಷಧಗಳು 250 ರೂಪಾಯಿಯಿಂದ 300 ರೂಪಾಯಿಯೊಳಗೆ ಸಿಗುತ್ತವೆ. ದರ ಕಡಿಮೆ ಇದೆ ಅಂದಾಕ್ಷಣ ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ. ಔಷಧ ಕಂಪನಿಗಳಿಂದ ಅವನ್ನು ಖರೀದಿಸುವಾಗ ಎಲ್ಲ ರೀತಿಯ ಗುಣಮಟ್ಟದ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಹಾಗಾಗಿ ಜನರು ಜನೌಷಧಿಯ ಉಪಯೋಗ ಪಡೆದುಕೊಳ್ಳಬೇಕು. ವೈದ್ಯರೂ ಆದಷ್ಟು ಜನೌಷಧಿಯನ್ನೇ ಶಿಪಾರಸು ಮಾಡಿ ಔಷಧ ಚೀಟಿ ಬರೆದುಕೊಡಬೇಕು ಎಂದು ವಿನಂತಿಸುತ್ತೇನೆ ಎಂದು ಹೇಳಿದರು.

ಮಾರ್ಚ್ 1 ರಿಂದ ಜನೌಷಧಿ ಸಪ್ತಾಹ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜನೌಷಧಿ ಮಾರಾಟಗಾರರು ಹಾಗೂ ಜನೌಷಧಿ ಫಲಾನುಭವಿಗಳ ಜೊತೆ ನೇರ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...