
ಗಂಗಾವತಿ: ಬೆಂಬಲ ಬಯಸಿದಲ್ಲಿ ಬಿಜೆಪಿಗೆ ಸಹಕಾರ ನೀಡುವುದಾಗಿ ಕೆಆರ್‌ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿ ಆಗಬೇಕೆಂಬುದು ದೇಶದ ಜನರ ಆಶಯವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಬೆಂಬಲ ನೀಡುವಂತೆ ಸೂಚಿಸಿದಲ್ಲಿ ಖಂಡಿತವಾಗಿಯೂ ಮೋದಿಯವರ ಗೆಲುವಿಗೆ ನನ್ನ ಶ್ರಮ ಇರುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿಗೆ ಮರಳಲು ಕೇಂದ್ರ ನಾಯಕರಿಂದ ಆಹ್ವಾನ ಬಂದಿದೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜಿ. ಜನಾರ್ದನ ರೆಡ್ಡಿ, ಸದ್ಯಕ್ಕೆ ಬಿಜೆಪಿಗೆ ಹೋಗುವುದಿಲ್ಲ. ಕೆಆರ್‌ಪಿಪಿ ಪಕ್ಷವನ್ನು ಸದೃಢವಾಗಿ ಬೆಳೆಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದೇನೆ. ನನ್ನ ಮೇಲೆ ಕೇಂದ್ರ ಬಿಜೆಪಿ ನಾಯಕರಿಗೆ ವಿಶೇಷ ಪ್ರೀತಿ ಇದ್ದು, ಯಾವ ನಾಯಕರು ಕೂಡ ನನ್ನನ್ನು ದೂರ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುವ ಶಕ್ತಿ ಸಮಯ ಎರಡೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.