alex Certify ಬಿಜೆಪಿಯಲ್ಲಿ ಜನಾರ್ದನ ರೆಡ್ಡಿ KRPP ವಿಲೀನ: ನಾಳೆಯೇ ಬೆಂಬಲಿಗರೊಂದಿಗೆ ಪಕ್ಷ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಲ್ಲಿ ಜನಾರ್ದನ ರೆಡ್ಡಿ KRPP ವಿಲೀನ: ನಾಳೆಯೇ ಬೆಂಬಲಿಗರೊಂದಿಗೆ ಪಕ್ಷ ಸೇರ್ಪಡೆ

ಬೆಂಗಳೂರು: ಬಿಜೆಪಿ ಜೊತೆಗೆ ಕೆ.ಆರ್.ಪಿ.ಪಿ. ವಿಲೀನಕ್ಕೆ ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪಾರಿಜಾತ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಪದಾಧಿಕಾರಿಗಳು ಹಾಗೂ ಬೆಂಬಲಿಗರೊಂದಿಗೆ ಸಭೆ ನಡೆಸಿ ಬಿಜೆಪಿಯಲ್ಲಿ ಕೆ.ಆರ್.ಪಿ.ಪಿ. ಪಕ್ಷ ವಿಲೀನ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ನಾಳೆ ಜನಾರ್ದನ ರೆಡ್ಡಿ ಬೆಂಬಲಿಗರ ಜೊತೆಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕಳೆದ ವರ್ಷ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ನಾಳೆ ಸೇರ್ಪಡೆಯಾಗುತ್ತಿದ್ದೇನೆ.ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...