ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ ಹಾಗೂ ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಜನಾರ್ಧನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿ, ಸಮನ್ಸ್ ಜಾರಿಗೊಳಿಸಿದೆ. ಲೋಕಾಯುಕ್ತ ಎಸ್ಐಟಿ ತನಿಖಾಧಿಕಾರಿಗಳು ಸಲ್ಲಿಸಿದ್ದ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಿತ ಜನಾರ್ದನ ರೆಡ್ಡಿ, ಅವರ ಆಪ್ತ ಕಾರ್ಯದರ್ಶಿ, ದೇವಿ ಎಂಟರ್ಪ್ರೈಸಸ್ ಪಾಲುದಾರ, ಓಬುಳಾಪುರಂ ಮೈನಿಂಗ್ ಕಂಪನಿ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶ ನೀಡಿದೆ. ಫೆಬ್ರವರಿ 12 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.