ಕೊಪ್ಪಳ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ, ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ಗುತ್ತಿಗೆದಾರ ಸಚಿನ್ ನಂತೆ ಹಲವು ಅಧಿಕಾರಿಗಳು, ಸಿಬ್ಬಂದಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಸರ್ಕಾರ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕಿತ್ತು. ಈಗಲಾದರೂ ತಕ್ಷಣ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲಿ. ಸಚಿನ್ ಕುಟುಂಬದ ಜೊತೆ ಬಿಜೆಪಿ ಬೆಂಬಲವಾಗಿ ಇರಲಿದೆ. ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕಿದೆ ಎಂದರು.
ಹಿಂದೆ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ರಾಜೀನಾಮೆ ಕೊಟ್ಟಿದ್ದರು. ಈಗ ಗುತ್ತುಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿದೆ. ಹೀಗಾಗಿ ಸಚಿವರು ರಾಜೀನಾಮೆ ಕೊಡುವುದು ಸೂಕ್ತ ಎಂದರು.