alex Certify BIG NEWS: ಜನತಾದರ್ಶನಕ್ಕೆ ಬಂದವರಿಗೆ ಉಚಿತ ಬಸ್ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನತಾದರ್ಶನಕ್ಕೆ ಬಂದವರಿಗೆ ಉಚಿತ ಬಸ್ ವ್ಯವಸ್ಥೆ

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನಕ್ಕೆ ಬಂದವರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ಮೊದಲ ಜನತಾದರ್ಶನ ಕಾರ್ಯಕ್ರಮ ನಡೆಸಿದ್ದು, ಗೃಹಕಚೇರಿ ಕೃಷ್ಣಾಗೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿತ್ತು. ಇಡೀ ದಿನ ಜನರ ಸಂಕಷ್ಟ, ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

ಜನತಾದರ್ಶನಕ್ಕೆ ಆಗಮಿಸಿದ್ದವರಿಗೆ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಗೃಹಕಚೇರಿ ಕೃಷ್ಣಾದಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಜನರಿಗೆ ಉಚಿತ ಪ್ರಯಾಣ ಒದಗಿಸಲಾಯಿತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...