ಟೊಕಿಯೋ: ಜಪಾನ್ ಪ್ರಧಾನಿ ರ್ಯಾಲಿ ವೇಳೆ ಸ್ಮೋಕ್ ಬಾಂಬ್ ದಾಳಿ ನಡೆಸಲಾಗಿದೆ. ವೊಕಾಯಾಮಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮಾತನಾಡುತ್ತಿದ್ದ ವೇಳೆಯಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆಸಲಾಗಿದೆ. ಕಿಶಿಡಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಮೋಕ್ ಬಾಂಬ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಫೋಟದ ಶಬ್ದ ಕೇಳಿದ ನಂತರ ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರನ್ನು ವೊಕಾಯಾಮಾದ ಬಂದರಿನಿಂದ ಸ್ಥಳಾಂತರಿಸಲಾಯಿತು. ಘಟನೆಯಲ್ಲಿ ಅವರಿಗೆ ಯಾವುದೇ ಹಾನಿಯಾಗಿಲ್ಲ.
ಜುಲೈ 2022 ರಲ್ಲಿ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಗುಂಡು ಹಾರಿಸಿ ಕೊಲ್ಲಲ್ಪಟ್ಟ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಹತ್ಯೆಯ ನಂತರ ಜಪಾನ್ ಪ್ರಧಾನಿ ಭದ್ರತೆಯನ್ನು ಹೆಚ್ಚಿಸಿದೆ.