ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜಾರಕಿಹೊಳಿ ಕುಟುಂಬದ ಮೂವರು ಸಹೋದರರು ಮತ್ತೊಮ್ಮೆ ಜಯಗಳಿಸಿದ್ದಾರೆ.
ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 57 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ 16,000ಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ 25,000 ಮತಗಳ ಅಂತರದಿಂದ ಜಯಗಳಿಸಿದ್ದು, ಈ ಮೂಲಕ ಸತೀಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ ಜಾರಕಿಹೊಳಿ ಈ ಚುನಾವಣೆಯಲ್ಲಿಯೂ ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ. ಮೂವರು ಸಹೋದರರು ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದ್ದಾರೆ.