
ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಮ್ಮ ವಿಭಿನ್ನ ಶೈಲಿಯ ಬೌಲಿಂಗ್ ಮೂಲಕವೇ ಬ್ಯಾಟ್ಸ್ ಮ್ಯಾನ್ಗಳಿಗೆ ನಡುಕ ಹುಟ್ಟಿಸುವ ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಐಪಿಎಲ್ ನಲ್ಲಿ ಕೂಡ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರು ತನ್ನ ಮೊದಲ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಎರಡು ವಿಕೆಟ್ ಕಬಳಿಸುವ ಮೂಲಕ 150 ವಿಕೆಟ್ಗಳ ಗಡಿ ಮುಟ್ಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಒಂದೇ ತಂಡದಲ್ಲಾಡುವ ಮೂಲಕ 150 ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡಕ್ಕೆ ಸುಮಾರು ವರ್ಷಗಳಿಂದ ಬೆನ್ನೆಲುಬಾಗಿ ನಿಂತಿರುವ ಇವರು ಐಪಿಎಲ್ ನ ಒಂದೇ ತಂಡದಲ್ಲಿ 150 ವಿಕೆಟ್ ಪಡೆದಿರುವ ಮೊದಲನೇ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಬರೆದಿದ್ದಾರೆ. ಇವರನ್ನು ಹೊರೆತುಪಡಿಸಿ 147 ವಿಕೆಟ್ ಪಡೆದುಕೊಂಡಿರುವ ಹೈದರಾಬಾದ್ ತಂಡದ ಭುವನೇಶ್ವರ್ ಕುಮಾರ್ ಇವರ ಹಿಂದೆಯೇ ಇದ್ದಾರೆ.
