ಜೌನ್‌ಪುರ: ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಭಾನುವಾರ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಗೌರಾ ಬಾದಶಾ ಪೊಲೀಸ್ ವೃತ್ತದ ಪ್ರಸಾದ್ ಕಾಲೇಜು ಬಳಿಯ ಪ್ರದೇಶದಲ್ಲಿ ಬೆಳಿಗ್ಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಪೊಲೀಸ್ ವರದಿಗಳ ಪ್ರಕಾರ, ಕಾರು ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಮೃತರು ಬಿಹಾರದ ಸೀತಾಮರ್ಹಿ ಜಿಲ್ಲೆಯ ನಿವಾಸಿಗಳಾಗಿದ್ದು, ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದರು.
ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತರನ್ನು ಅನೀಶ್ ಶರ್ಮಾ, ಗಜಧರ್ ಶರ್ಮಾ, ಜವಾಹರ್ ಶರ್ಮಾ, ಗೌತಮ್ ಶರ್ಮಾ, ಸೋನಂ ಮತ್ತು ರಿಂಕು ಎಂದು ಗುರುತಿಸಲಾಗಿದೆ. ಜೀತು ಶರ್ಮಾ, ಮೀನಾ ದೇವಿ ಮತ್ತು ಯುಗ್ ಶರ್ಮಾ ಗಾಯಗೊಂಡಿದ್ದಾರೆ.