ರಾಜ್ಯದಲ್ಲಿ ಮುಂಗಾರು ಮಳೆ ಮುಗಿಯುವ ಲಕ್ಷಣಗಳೇ ಗೋಚರವಾಗುತ್ತಿಲ್ಲ. ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗ ಮತ್ತು ಉತ್ತರ ಅಂಡಮಾನ್ ಭಾಗಗಳಲ್ಲಿ ಉಂಟಾಗಿರುವ ಸುಳಿಗಾಳಿ, ಜವಾಬ್ ಚಂಡಮಾರುತ ಈ ಎಲ್ಲಾ ಕಾರಣಗಳಿಂದ ರಾಜ್ಯದ 23 ಜಿಲ್ಲೆಗಳಲ್ಲಿ ಅಕ್ಟೋಬರ್ 15ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಇಂದು ಹಾಗೂ ನಾಳೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ.
ನವರಾತ್ರಿ ಸ್ಪೆಷಲ್ ʼಕೊಬ್ಬರಿ ಹಲ್ವಾʼ
ಅಂಡಮಾನ್ ಸಮುದ್ರದ ಉತ್ತರ ಭಾಗದಲ್ಲಿ ಚಂಡಮಾರುತ ಇದ್ದು ಇದರಿಂದಾಗಿ ಇಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ, ಸೋಮವಾರ ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ರಾಮನಗರ, ಕೋಲಾರ, ಚಿಕ್ಕಮಗಳೂರಿನಲ್ಲಿ ಅಕ್ಟೋಬರ್ 15ರವರೆಗೂ ಭಾರೀ ಮಳೆಯಾಗಲಿದ್ದು ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಅಕ್ಟೋಬರ್ 15ರವರೆಗೂ ಸುರಿಯುವ ಮಳೆಯಲ್ಲಿ ಚಂಡಮಾರುತದ ಪ್ರಭಾವ ಇರುವುದರಿಂದ ಗುಡುಗು ಸಹಿತ ಮಳೆ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.