![](https://kannadadunia.com/wp-content/uploads/2023/08/navodaya-school.jpg)
ನವೋದಯ ವಿದ್ಯಾಲಯದಲ್ಲಿ 9 ಮತ್ತು 11 ನೇ ತರಗತಿಯಲ್ಲಿ ಖಾಲಿಯಿರುವ ಸ್ಥಾನಗಳಿಗೆ ಫೆಬ್ರವರಿ, 10 ರಂದು ಜವಾಹರ್ ನವೋದಯ ವಿದ್ಯಾಲಯದಲ್ಲ್ಲಿ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ನೋಂದಾಯಿತ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ನವೋದಯ ವಿದ್ಯಾಲಯ ಸಮಿತಿಯು ತನ್ನ ಅಧಿಕೃತ ವೆಬ್ಸೈಟಿನಲ್ಲಿ ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ತಮ್ಮ ರಿಜಿಸ್ಟ್ರೇಶನ್ ನಂಬರ್ ಬಳಸಿ https://navodaya.gov.in ಈ ವೆಬ್ಸೈಟಿನಿಂದ ನೇರವಾಗಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಸಾಧ್ಯವಾಗದ ಅಭ್ಯರ್ಥಿಗಳು ತಮ್ಮ ಮಗ/ಮಗಳು ಓದುತ್ತಿರುವ ಶಾಲೆ ಅಥವಾ ನವೋದಯ ವಿದ್ಯಾಲಯವನ್ನು ಸಂಪರ್ಕಿಸಬಹುದು.