
ಸುಮಾರು 12 ಮಂದಿ ದುಷ್ಕರ್ಮಿಗಳು ಪ್ರತಿಮೆಯನ್ನು ಸುತ್ತಿಗೆಯಿಂದ ಹೊಡೆಯುತ್ತಾ ಪ್ರತಿಮೆಯನ್ನು ಭಗ್ನಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಜಿಲ್ಲಾಧಿಕಾರಿಗಳ ಕಚೇರಿಗೆ ಸುಮಾರು 50 ಮೀಟರ್ ದೂರದಲ್ಲಿರುವ ಧಾವರಿ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಕೇಸರಿ ಬಾವುಟಗಳನ್ನು ಹಿಡಿದಿದ್ದ ದುಷ್ಕರ್ಮಿಗಳು ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದು, ನೆಹರೂ ಪ್ರತಿಮೆಯನ್ನು ಭಗ್ನಗೊಳಿಸಲು ಪ್ರಯತ್ನಿಸುವ ಮೂಲಕ ಸಮಾಜದಲ್ಲಿ ಕ್ಲೇಷ ಪರಿಸ್ಥಿತಿಯನ್ನು ಉಂಟು ಮಾಡುವ ದುರುದ್ದೇಶ ಹೊಂದಿದ ಆರೋಪದ ಮೇಲೆ ಅನಾಮಧೇಯ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.