
ಕಾರವಾರ: ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಕೈಗಾ ಅಣುಸ್ಥಾವರದ ಬಳಿ ಘಟನೆ ನಡೆದಿದೆ.
ಬಿಹಾರ ಮೂಲದ ಸಿಐಎಸ್ಎಫ್ ಯೋಧ ಅರವಿಂದ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೈಗಾದ ಕ್ವಿಕ್ ರೆಸ್ಪಾನ್ಸ್ ಟೀಮ್ ನಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ಬರುವಾಗ ಗನ್ ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಕ್ಷಣಾ ಸಿಬ್ಬಂದಿ ಆತ್ಮಹತ್ಯೆಯಿಂದಾಗಿ ಕೈಗಾದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.