ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರನದಲ್ಲಿ ಜಪ್ತಿಯಾದ ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸುವಂತೆ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಜಯಲಲಿತಾ ಅವರ ವಾರಸುದಾರೆ ಜೆ.ದೀಪಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್, ಜಪ್ತಿಯಾಗಿರುವ ಒಡವೆಯನ್ನು ಸರ್ಕಾರಕ್ಕೆ ಹಿಂತಿರುಗಿಸುವಂತೆ ಸೂಚಿಸಿದೆ.
ಕಲೆದ ವರ್ಷ ಮಾರ್ಚ್ 6, 7ರಂದು ಒಡವೆಗಳನ್ನು ಹಸ್ತಾಂತರ ಮಾಡಬೇಕಿತ್ತು. ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆ ಎಂದು ಜಯಲಲಿತಾ ವಾರಸುದಾರೆ ಜೆ.ದೀಪಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ ಎಸ್ ಪಿ ಕಿರಣ್ ಜವಳಿ ದೀಪಾ ಅರ್ಜಿಗೆ ಆಕ್ಷೇಪ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಜೆ.ದೀಪಾ ಅರ್ಜಿ ವಜಾಗೊಳಿಸಿದೆ.